ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಬೃಹತ್ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಮಹತ್ವದ ಮೂಲಸೌಕರ್ಯ ಯೋಜನೆಗೆ ಬಸವಣ್ಣನವರ ಹೆಸರಿಡುವ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಯೋಜನೆಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ರಂಗಭೂಮಿಯಿಂದ ಬೆಳ್ಳಿ ಪರದೆಗೆ: ‘ಕಾಂತಾರ’ದ ಬೆಳಕಲ್ಲಿ ಶಿವಮೊಗ್ಗದ ಮಂಜು ರಂಗಾಯಣ
ಶಿವಮೊಗ್ಗ: ಸಿನಿಮಾ ರಂಗಕ್ಕೆ ರಂಗಭೂಮಿಯೇ ತಳಪಾಯ. ಆ ನೆಲದ ಗಟ್ಟಿತನವನ್ನು ಉಳಿಸಿಕೊಂಡು ಯಶಸ್ಸಿನ ಶಿಖರ ಏರುತ್ತಿರುವ ಶಿವಮೊಗ್ಗದ ಪ್ರತಿಭೆ, ಖ್ಯಾತ ರಂಗನಟ ಹಾಗೂ ನಿರ್ದೇಶಕ ಮಂಜು ರಂಗಾಯಣ ಅವರೀಗ ದೇಶಾದ್ಯಂತ ಸದ್ದು ಮಾಡುತ್ತಿರುವ ‘ಕಾಂತಾರ (ಭಾಗ-1)’ ಚಿತ್ರದಲ್ಲಿನ ವಿಶೇಷ ಪಾತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಶಿವಮೊಗ್ಗ ದಸರಾ: ಒಂದು ಸಾವಿರ ಸಸಿ ನೆಟ್ಟು ಪರಿಸರ ಜಾಗೃತಿ
ಶಿವಮೊಗ್ಗ: ಪರಿಸರ ದಸರಾ – 2025 ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಸರಾ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ತರ ಸಂದೇಶದೊಂದಿಗೆ ಯಶಸ್ವಿಯಾಗಿದೆ. ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿಯ ಯುಟಿಪಿ ಜಾಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.
ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ: ನಾಳೆ ಸೆ. 16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ
ಶಿವಮೊಗ್ಗ: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮಹತ್ವದ ಹಂತ ತಲುಪಿದೆ. ಈ ಸಂಬಂಧ ರಾಜ್ಯ ಸರ್ಕಾರವು ನಾಳೆ, ಸೆಪ್ಟೆಂಬರ್ 16, 2025 ರಂದು ಪ್ರಮುಖ ಸಭೆ ಕರೆದಿದೆ. ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ ಎಂದು ಹೇಳಲಾಗಿದೆ.
ಶಿವಮೊಗ್ಗ: ಈ ಎರಡು ದಿನ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಸೆಪ್ಟೆಂಬರ್ 16 ಮತ್ತು 17 ರಂದು ನಗರದ ಹಲವು ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಶಿವಮೊಗ್ಗ: ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್‌ನಲ್ಲಿ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ, ಎರಡು ಎಮ್ಮೆ, ಒಂದು ಕೋಣ ಹಾಗೂ ಎರಡು ಹೋರಿಗಳನ್ನು ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಸಂಪಳ್ಳಿ ಕಡೆಯಿಂದ ಬಿಳಕಿ ಗ್ರಾಮದ ಶಿಕಾರಿಪುರಕ್ಕೆ ಸಾಗಾಣಿಕೆ ಮಾಡುತ್ತಿದ್ದಾಗ, ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ರಮ ಸಾಗಾಟ ಬಯಲಾಗಿದ್ದು, ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಮತ್ತು ಮಕ್ಬುಲ್...
ಶಿಕಾರಿಪುರಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಮನವಿ| ವಿದ್ಯಾರ್ಥಿ ಹಾಗೂ ಗ್ರಾಮಸ್ಥರ ಸಮಸ್ಯೆಗೆ ನೆರವಾದ ಕರವೇ; ಸ್ಪಂದಿಸಿದ ಅಧಿಕಾರಿಗಳು
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಪುನೇದಹಳ್ಳಿ, ಕುಸ್ಕೂರು ಮತ್ತು ಹಿರೇಜಂಬೂರು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಬಸ್ ಸಮಸ್ಯೆಯನ್ನು ಪರಿಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಈ ಗ್ರಾಮಗಳ ಮೂಲಕ ಕೇವಲ ಎರಡು ಬಸ್‌ಗಳು ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಸ್‌ಗಳಲ್ಲಿ ಜಾಗವಿಲ್ಲದೆ ಹಲವು ವಿದ್ಯಾರ್ಥಿಗಳನ್ನು ಕೆಳಗಿಳಿಸಲಾಗುತ್ತಿದ್ದು, ದಟ್ಟಣೆಯಿಂದಾಗಿ ಅಪಾಯದ ಸಾಧ್ಯತೆಗಳೂ ಹೆಚ್ಚಿದ್ದವು. ಸಮಯಕ್ಕೆ ಸರಿಯಾಗಿ ಬಸ್‌ಗಳು ಸಿಗದೆ ಪರೀಕ್ಷೆಗಳಿಗೂ ತೊಂದರೆಯಾಗುತ್ತಿತ್ತು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆ-ಕಾಲೇಜುಗಳಿಗೆ ಬೈಕ್‌ನಲ್ಲಿ ಬಿಟ್ಟು ಬರುವ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಈ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ ಶಿಕಾರಿಪುರ ತಾಲ್ಲೂಕು ಅಧ್ಯಕ್ಷರಾದ ರವಿ ನಾಯ್ಕ್ ಡಿ. ಅವರು ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮ್ಯಾನೇಜರ್‌ಗೆ...
ಹಸೆಮಣೆ ಏರಬೇಕಿದ್ದ ಯುವತಿ ಶಿವಮೊಗ್ಗದ ರಸ್ತೆ ಅಪಘಾತದಲ್ಲಿ ದುರಂತ ಸಾವು! ಮದುವೆಗೆ 15 ದಿನಗಳಿರುವಾಗಲೇ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು.
ಶಿವಮೊಗ್ಗ: ಮದುವೆಗೆ ಇನ್ನೇನು 15 ದಿನಗಳಷ್ಟೇ ಬಾಕಿ ಇರುವಾಗ, ವಿಧಿಯಾಟಕ್ಕೆ ಬಲಿಯಾದ ಯುವತಿಯೋರ್ವಳ ದುರಂತ ಘಟನೆ ಶಿವಮೊಗ್ಗದ ಮಲವಗೊಪ್ಪ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆಯ ವಿವರ: ಇಂದು ಬೆಳಿಗ್ಗೆ ಸುಮಾರು 9:30ರ ಸುಮಾರಿನಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಕವಿತಾ ತನ್ನ ಸಹೋದರ ಸಂತೋಷ್ ಜೊತೆ ದ್ವಿಚಕ್ರ ವಾಹನದಲ್ಲಿ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದಳು. ಈ ವೇಳೆ, ಕುರುಕಲು ಪದಾರ್ಥ ಮತ್ತು ಬೋಟಿ ಮಾರಾಟ ಮಾಡುವ ದ್ವಿಚಕ್ರ ವಾಹನವೊಂದು ಅತಿಯಾದ ಲಗೇಜ್‍ನೊಂದಿಗೆ ವೇಗವಾಗಿ ಬಂದು, ಅವರ ಬೈಕ್‌ಗೆ ತಾಗಿ ಅತಿವೇಗವಾಗಿ ಬಂತು. ಇದರಿಂದ ನಿಯಂತ್ರಣ ಕಳೆದುಕೊಂಡ ಕವಿತಾ ಹಾಗೂ ಸಂತೋಷ್ ರಸ್ತೆಗೆ ಬಿದ್ದಿದ್ದಾರೆ. ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ...
ಶಿವಮೊಗ್ಗ: ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ???
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್ ಎಂಬುವವರು, ಮನೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಈ ಕಾರ್ಯಾಚರಣೆ ನಡೆದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ನಿವಾಸಿ ಮೊಹಮ್ಮದ್ ಆಸಿಫ್ ಉಲ್ಲಾ ರವರು, ತಾವು ಅಹ್ಮದ್ ಅಲಿ ಎಂಬುವವರಿಂದ ಖರೀದಿಸಿದ್ದ ಮನೆಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ಕಾಗಿ ಆಶ್ರಯ ವಿಭಾಗದ ಅಧಿಕಾರಿ ಶಶಿಧರ್ ₹10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಲಂಚದ...
ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಮತ್ತೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ಇದೇ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ SC/STಗೆ ಮಾತ್ರ ಮೀಸಲಿಟ್ಟ SCSP-TSP (ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿದ ಕಾರಣದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ...