ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಶಿವಮೊಗ್ಗ : ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ನಗರ ಜೆ.ಡಿ.ಎಸ್ ವತಿಯಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಜಮ್ಮು-ಕಾಶ್ಮೀರದ ರಜೋರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಹೆಮ್ಮೆಯ ವೀರಯೋಧ ಎಮ್.ಇ ಪ್ರಾಂಜಲ್ ಹಾಗೂ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಯೋಧರಿಗೆ ಹಾಗೂ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೂ ಶಿವಮೊಗ್ಗ ನಗರ ಜೆ.ಡಿ.ಎಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್, ಜೆಡಿಎಸ್ ನ ದೀಪಕ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply