ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ

ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ನಮ್ಮ ಕಲಿಕೆಗೆ ಪೆಟ್ಟು ಬೀಳುತ್ತಿದೆ, ತರಗತಿಗಳು ನಡೆಯುತ್ತಿಲ್ಲ ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.

 ಸಾಗರದ ಪ್ರತಿಷ್ಠಿತ ಶ್ರೀಮತಿ ಇಂದಿರಾ ಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ಪಾಠ ಪ್ರವಚನಗಳಿಗೆ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದ್ದು, ಅತಿಥಿ ಉಪನ್ಯಾಸಕರೇ ತರಗತಿಗಳನ್ನ ನಡೆಸುತ್ತಿದ್ದರು. ನಮಗೆ ಪರೀಕ್ಷೆ ಸಮೀಪಿಸುತ್ತಿದೆ. ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ನಮ್ಮ ಕಲಿಕೆಗೆ ಹಿನ್ನಡೆ ಆಗಬಹುದೆಂಬ ಆತಂಕ ಎದುರಾಗಿದೆ.

ಕರ್ನಾಟಕ ಸರ್ಕಾರ ತಕ್ಷಣ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅನುವು ಮಾಡಿಕೊಡಬೇಕು, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿಗೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಲೀನಾ, ಸಿಂಚನಾ, ಸುಚೇತ, ಅರ್ಪಿತಾ, ಅಂಕಿತಾ ಎಂ. ನಾಯ್ಕ್, ಅಕ್ಷತಾ ಕೆ.ವೈ., ಸಿಂಚನಾ, ಮೌಲ್ಯ, ಸುರೇಖ, ಚಿನ್ಮಯಿ ಮತ್ತಿತರರು ಹಾಜರಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.