ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ !
ಶಿವಮೊಗ್ಗ : ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದೆ.
ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾರು ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದ್ದು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ,
ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಜನ ಇದ್ದರು ಎಂಬ ಮಾಹಿತಿ ವರದಿಯಾಗಿದೆ. ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿ ಇದ್ದವರು ಚಿಕ್ಕಮಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅದೃಷ್ಟವಾಸತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಣಪತಿ ದೇವಸ್ಥಾನದ ಕಟ್ಟೆಯ ಮೇಲೆ ದಿನನಿತ್ಯ ಶಾಲೆ ಮಕ್ಕಳು, ಹಿರಿಯರು ಊರಿನ ಗ್ರಾಮಸ್ಥರು ಕುಳಿತುಕೊಳ್ಳುತ್ತಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಯಾರೂ ಕೂಡ ಕಟ್ಟೆಯ ಮೇಲೆ ಇರಲಿಲ್ಲ ಹಾಗಾಗಿ ಭಾರಿ ಅನಾಹುತ ತಪ್ಪಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಜಾಹಿರಾತು :
Leave a Reply