ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ !

ಶಿವಮೊಗ್ಗ : ನಗರದ ಕೆ ಆರ್ ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್ ಮೇಲೆ ದಾಳಿ ನಡೆದಿದೆ.

ಈ ಕಟ್ಟಡವು ನಿವೃತ್ತ ಪೊಲೀಸ್ ಅಧಿಕಾರಿ ರಹಮತ್ ಅಲಿ ಅವರಿಗೆ ಸೇರಿದ್ದಾಗಿದ್ದು, ಮಂಗಳೂರು ಮೂಲದ ಹರೀಶ್ ಶೆಟ್ಟಿ ಎಂಬುವವರು ಲಾಡ್ಜ್ ನಡೆಸುತ್ತಿದ್ದರು.

 ಡಿವೈಎಸ್ಪಿ ಬಾಲರಾಜ್,ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ರವಿ ಸಂಗನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನೈತಿಕ ಚಟುವಟಿಕೆ ಹಿನ್ನೆಲೆ ಈ ದಾಳಿ ನಡೆದಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

 ಇಂದು ಬೆಳಿಗ್ಗೆ ಯುವಕ ಯುವತಿಯರು ಬ್ಲೂ ಕ್ರಿಸ್ಟಲ್ ಲಾಡ್ಜ್ ನಲ್ಲಿ ಎರಡು ರೂಮ್ ಪಡೆದಿದ್ದರು. ರೂಮ್ ಪಡೆದ ಹಿನ್ನೆಲೆಯಲ್ಲಿ ಸ್ಥಳೀಯರು ದೂರು ನೀಡಿದ್ದಾರೆ , ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.