ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ?

ಚಿಕ್ಕಮಗಳೂರು : ನೆರೆಯ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ಶುರುವಾಗಿದೆ, ಮೊನ್ನೆ ಪೊಲೀಸ್ ಠಾಣೆಯಾಗಿದ್ದರು ವಕೀಲರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರೆ, ನಿನ್ನೆ ರಾತ್ರಿ ದಿಢೀರ್ 200 ಕ್ಕೂ ಹೆಚ್ಚು ಪೊಲೀಸರು ರಸ್ತೆಗೆಳಿದು ರಸ್ತೆ ತಡೆ ಮಾಡಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ, ಈ ಅಪರೂಪದ ಪ್ರತಿಭಟನೆಗೆ ಚಿಕ್ಕಮಗಳೂರು ಸಾಕ್ಷಿಯಾಗುತ್ತಿದೆ. ಏನಿದು ಪ್ರಕರಣ? ಏತಕ್ಕಾಗಿ ಈ ಪ್ರತಿಭಟನೆ ?

ನವೆಂಬರ್ 30 ಗುರುವಾರ ಸಾಯಂಕಾಲ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ (PSI), ಒಬ್ಬ ಎಎಸ್ ಐ, ಒಬ್ಬ ಹೆಡ್ ಕಾನ್ ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಘಟನೆಯನ್ನು ಖಂಡಿಸಿ ವಕೀಲರ ಸಂಘದಿಂದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು ಹಲ್ಲೆ ನಡೆಸಿದ ಪೊಲೀಸರನ್ನು ಬಂದಿಸುವವರೆಗೆ ಪ್ರತಿಭಟನೆಯನ್ನು ನಿಲ್ಲಸುವುದಿಲ್ಲ ಎಂದು ಕೋರ್ಟಿನಿಂದ ಆಜಾದ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಠಾಣೆ ಮುಂದೆ ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ, ವಿಚಾರಣೆ ನಡೆಸಿ, ಪಿಎಸ್​ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದರು. ಜೊತೆಗೆ ಹಲ್ಲೆ ಮಾಡಿದ ಪೊಲೀಸರ ವಿರುದ್ದ ಐಪಿಸಿ ಸೆಕ್ಷನ್​​​​​​ 307, 324, 506, 504ರ ಅಡಿ ಪ್ರಕರಣ ದಾಖಲಾಗಿತ್ತು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಯುವ ವಕೀಲ ಪ್ರೀತಮ್ ಅವರ ಮೇಲೆ ಹಲ್ಲೆಯನ್ನ ಖಂಡಿಸಿ ಶಿವಮೊಗ್ಗದಲ್ಲೂ ವಕೀಲರು ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು,

ಈ ಹಿನ್ನಲೆಯಲ್ಲಿ ನೆನ್ನೆ ರಾತ್ರೋರಾತ್ರಿ 200 ಕ್ಕೂ ಹೆಚ್ಚು ಪೋಲಿಸರಿಂದ ಠಾಣೆ ಒಳಗಡೆ ನುಗ್ಗಿ ವಕೀಲರು ದಾಂಧಲೆ ನಡೆಸಿದ್ದಾರೆ ಎಂದು ಚಿಕ್ಕಮಗಳೂರು ಪೊಲೀಸ್ ಠಾಣೆಯ ಎದುರು ಆರು ಠಾಣೆಗಳ ಪೊಲೀಸ್‌ ಸಿಬ್ಬಂದಿ ಕರ್ತವ್ಯ ಸ್ಥಗಿತಗೊಳಿಸಿ ಮೌನ ಪ್ರತಿಭಟನೆ ಬಳಿಕ ರಸ್ತೆ ತಡೆ ನಡೆಸಿದ್ದಾರೆ.

ಜಾಹಿರಾತು :

ಆರು ಪೊಲೀಸ್‌ ಠಾಣೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರು ನಗರ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿ ಅಸಮಾಧಾನ ಹೊರಹಾಕಿದ್ದಾರೆ,ಮಂಗಳೂರಿನಿಂದ ಧಾವಿಸಿದ ಐಜಿಪಿ ಡಾ|ಚಂದ್ರಗುಪ್ತ ಅವರಿಗೂ ಮುತ್ತಿಗೆ ಹಾಕಿದರು. ಅಮಾನತುಗೊಂಡಿರುವ ಪೊಲೀಸರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸಾರ್ವಜನಿಕರಿಗೆ ರಕ್ಷಣೆ ನೀಡುತ್ತಿರುವ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ವಿಕ್ರಮ್‌ ಅಮಟೆ ಮುಂದೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮತ್ತು ಅಮಾನತ್ತು ಆದ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಅಳಲನ್ನು ತೋಡಿಕೊಂಡಿದ್ದಾರೆ,ತಮ್ಮ ಕರ್ತವ್ಯ ನಿರ್ವಹಿಸಿದರೇ ಸಸ್ಪೆಂಡ್​ ಶಿಕ್ಷೆ ನೀಡುವುದು ಎಷ್ಟು ಸರಿ ಎಂದು ಆಕ್ರೋಶ ಹೊರಹಾಕಿದರು.

ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಠಾಣೆ ಸಿಬ್ಬಂದಿ ಜಿಲ್ಲಾ ಕೇಂದ್ರಕ್ಕೆ ಬಂದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡುವ ಮೂಲಕ ಪೊಲೀಸರು ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿಸಿದ್ದಾರೆ.  

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.