ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.

ಶಿವಮೊಗ್ಗ : 2023-2024ನೇ ಸಾಲಿನ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,

ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ),ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಗಂಗಾ ಕಲ್ಯಾಣ ಯೋಜನೆ

ಡಾ. ಎಚ್ ಸಿ ಮಹಾದೇವಪ್ಪ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರು. ಹಾಗೂ ಶ್ರೀ ಬಿ. ನಾಗೇಂದ್ರ ಮಾನ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಸಿದರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂತಿರುವುದು

ಸ್ವಯಂ ಉದ್ಯೋಗ ನೇರಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ, ಸಹಾಯಧನ 50 ಸಾವಿರ ರೂ ಧನ ನೀಡಲಾಗುವುದು. ಶೇ.4 ರಷ್ಟು ಬಡ್ಡಿದರದಲ್ಲಿ ನೀಡಲಾಗುವುದು.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ)

ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1.00 ಲಕ್ಷವಿದೆ. ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1.00 ಲಕ್ಷವಿದೆ. ಸರಕು ವಾಹನ /ಟ್ಯಾಕ್ಸಿ (ಹಳದಿ ಬೋರ್ಡ್‌) ಖರೀದಿಸುವ ಉದ್ದೇಶಕ್ಕೆ ಮಾತ್ರವಾಗಿರುತ್ತದೆ. ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 4.00 ಲಕ್ಷ ನೀಡಲಾಗುತ್ತದೆ.

ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಠ 10 ಸದಸ್ಯರು ಕಿರು

ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು ಘಟಕ ವೆಚ್ಚ ರೂ. 2.50 ಲಕ್ಷ ಸಹಾಯಧನ: ರೂ 1.50 ಲಕ್ಷ ಸಾಲ: ರೂ. 1.00 ಲಕ್ಷ (ಶೇಕಡ 4ರಷ್ಟು ಬಡ್ಡಿದರ) ನಿಗದಿ ಪಡಿಸಲಾಗಿದೆ.

ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು. ಘಟಕ ವೆಚ್ಚ ರೂ. 25,00 ಲಕ್ಷ ರೂ. 20,000 ಲಕ್ಷ ಸಹಾಯಧನ: ಶೇ. 50 ಸಾಲ: ಶೇ. 50 (ಶೇಕಡ 1ರಷ್ಟು ಬಡ್ಡಿದರ) ನೀಡಲಾಗುತ್ತದೆ

ಹೆಚ್ಚಿನ ಮಾಹಿತಿಗಾಗಿ ರಾಘವೇಂದ್ರ ಜಿ. ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 80508 54042 ಸಂಪರ್ಕಿಸ ಬಹುದಾಗಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ

ಜಾಹಿರಾತು :


Leave a Reply

Your email address will not be published.