BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿನಿ ಮೇಘಶ್ರೀ ಹೋಮ್​ ಸಿಕ್​​ಗೆ‌ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು (ಡಿ.05) ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.