ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !
ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ.
ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ.
ಶಾಲಾ ಆಡಳಿತ ಮಂಡಳಿ ಮಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಎಂದು ಮೃತ ಮೇಘಶ್ರೀ ತಂದೆ ಓಂಕಾರಪ್ಪ ದೂರಿದ್ದಾರೆ.
ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು ಕಾಲೇಜಿನ ಬಳಿ ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply