ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.
ಶಿವಮೊಗ್ಗ : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಯಲ್ಲಿ ದೂರ ಶಿಕ್ಷಣ ಮತ್ತು ರೆಗ್ಯುಲರ್ ಡಿಪ್ಲೊಮಾ ತರಗತಿಗಳನ್ನು ಆರಂಭಿಸಲಾಗಿದೆ.
2024ನೇ ಜನವರಿ 1ರಿಂದ ತರಗತಿಗಳು ಆರಂಭವಾಗಲಿದ್ದು, 6 ತಿಂಗಳ ಅವಧಿ ತರಬೇತಿ ಆಗಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರು ಅರ್ಜಿ ಸಲ್ಲಿಸಬಹುದು.
ಡಿ.15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು . ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಅವಕಾಶವಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ ₹500 ಶಿಷ್ಯವೇತನ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ₹600 ಮಾಸಿಕ ಶಿಷ್ಯವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂ: 08182-248872 ಇಲ್ಲಿಗೆ ಸಂಪರ್ಕಿಸಬಹುದು.
ವರದಿ : ಲಿಂಗರಾಜ್ ಗಾಡಿಕೊಪ್ಪ
ಜಾಹಿರಾತು :
Leave a Reply