ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ ! ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ !
ಶಿವಮೊಗ್ಗ : ಸ್ಟಾರ್ ಏರ್ಲೈನ್ಸ್ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ಪ್ರಯಾಣಿಕರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್ಲೈನ್ಸ್ ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನವನ್ನು ರದ್ದು ಮಾಡಲಾಗಿದೆ. ಹಾಗಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿರುವಂತಹ ಘಟನೆ ನಡೆದಿದೆ. ನಿನ್ನೆ ಕೂಡಾ ಶಿವಮೊಗ್ಗದಿಂದ ಗೋವಾಕ್ಕೆ ವಿಮಾನ ಹಾರಾಟ ರದ್ದು ಮಾಡಲಾಗಿತ್ತು. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇಂದು ಬೆಳಗ್ಗೆ 11ಕ್ಕೆ ವಿಮಾನ ತೆರಳಬೇಕಿತ್ತು. ಗೋವಾ ಪ್ರವಾಸಕ್ಕೆ ತೆರಳುತ್ತಿರುವ ಪ್ರಯಾಣಿಕರಿಂದ ಸಂಸ್ಥೆಯ ಅಧಿಕಾರಗಳ ಜೊತೆ ಮಾತಿನ ಚಕಮಕಿ ಉಂಟಾಗಿದ್ದು, ಪ್ರಯಾಣಿಕರ ಸಮಸ್ಯೆಗೆ ಸ್ಟಾರ್ ಏರ್ ಲೈನ್ಸ್ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ ಎನ್ನಲಾಗುತ್ತಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply