BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !
ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದ್ದು, ಸೋಂಕಿತರಿಗೆ ಬೆಡ್ ವ್ಯವಸ್ಥೆ, ವೆಂಟಿಲೇಟರ್ ಸೇರಿದಂತೆ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೋವಿಡ್ ಭೀತಿ ಮನೆ ಮಾಡಿದ್ದು, ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಸೂಚನೆಗಳನ್ನು ನೀಡಿದೆ.
ಅನೇಕ ತಿಂಗಳ ನಂತರ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply