ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿರುತ್ತದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಹೆಚ್ಚಿನ ವಿವರಗಳು ಇಲಾಖಾ ವೆಬ್‍ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ : 8050770004 ಹಾಗೂ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ದೂವಾಣಿ ಸಂಖ್ಯೆ : 08182-222129 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.