ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ !
ಚಿಕ್ಕಮಗಳೂರು : ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನ ತಡೆಯಲು ಹೋದ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ
ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನ ತಡೆಯಲು ಹೋದ ಪೊಲೀಸರಿಗೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ವಿರೋದಧ ನಡುವೆಯೂ ಏಕಾಏಕಿ ಪಟಾಕಿ ಹಚ್ಚಿದ್ದರಿಂದ ಕೆಲ ಪೊಲೀಸರಿಗೆ ಗಾಯವಾಗಿದೆ. ಹೀಗಾಗಿ ಹಲ್ಲೆಗೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಂಜು, ಸುನಿಲ್ ಸೇರಿದಂತೆ 7 ಜನರ ಮೇಲೆ FIR ದಾಖಲಿಸಲಾಗಿದೆ. ಗಾಯಗೊಂಡಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಇನ್ನು ಶೋಭಾಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ ರವಿ ಅವರು ಭಾಗಿಯಾಗಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply