ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ !
ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ.
ಜಿಲ್ಲಾ ರಕ್ಷಣಾಧಿಕಾರಿ, ಅಪಾರ ಜಿಲ್ಲಾಧಿಕಾರಿ ಹಾಗೂ ಡಿ.ಡಿ.ಪಿ.ಐ ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಆ ದಿನ ಮೂಲ ದಾಖಲೆ ಯೊಂದಿಗೆ ಹಾಜರಾಗಲು ಸೂಚಿಸಿದೆ.
ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂ. 08182-222630 ಸಂಪರ್ಕಿಸುವಂತೆ ಗೃಹ ರಕ್ಷಕದಳದ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply