ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ
ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಪರವಾನಿಗೆ ಕುರಿತಾದ ವಿಷಯ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply