ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ !
ಶಿವಮೊಗ್ಗ : ತಾಲೂಕಿನ ಹೊಳಲೂರು ಬಳಿ ಹಿಂಬದಿಯಿಂದ ಬಂದ ಕೆ ಎಸ್ ಆರ್ ಟಿ ಸಿ ಬಸ್ ಬೈಕ್ ಗೆ ಹೊಡೆದಿದೆ.
ನಗರದ ಮೆಡಿಕಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನ ಹಣೆಯ ಭಾಗಕ್ಕೆ , ಮತ್ತು ದೇಹದ ಇತರೆ ಭಾಗಗಳಿಗೆ ಗಾಯಗಳಾಗಿವೆ.
ಗಾಯಾಳು ಚೀಲೂರಿನ ನಿವಾಸಿ ದೀಪಕ್ ರಾಜು (35) ಜ.2 ರಂದು ರಾತ್ರಿ 10 ಗಂಟೆಗೆ ಕೆಲಸ ಮುಗಿಸಿಕೊಂಡು ವಾಪಾಸ್ ಚೀಲೂರಿಗೆ ಎಲೆಕ್ಟ್ರಿಕ್ ಬೈಕ್ ನಲ್ಲಿ ಹೋಗುವಾಗ ಹೊಳಲೂರು ಬಳಿ ಹಿಂಬದಿಯಿಂದ ಬಂದ ಕೆಎ 18 ಎಫ್ 0915 ಕ್ರಮ ಸಂಖ್ಯೆಯ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಬೈಕ್ ಸವಾರ ದಾಖಲಾಗಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply