ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ ವಿದ್ಯಾರ್ಥಿಗಳು !
ಶಿವಮೊಗ್ಗ : ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆಗಳಿದು ಪ್ರತಿಭಟನೆ ಮಾಡಿದ್ದಾರೆ.
ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ನೂರಾರು ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆ ತಡೆದು ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಾಧ್ಯಾಪಕರನ್ನು ಈ ಕೂಡಲೇ ಅಮಾನತುಗೊಳಿಸಬೇಕೆಂದು ಪ್ರತಿಭಟನೆ ನಡೆಸಿದ್ದಾರೆ
ವಿದ್ಯಾರ್ಥಿಗಳ ಆರೋಪ ಏನು ?
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಭೌತ ಶಾಸ್ತ್ರದ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಯರ ಜೊತೆ ಅನುಚಿತ ವಾಗಿ ಮತ್ತು ಅಸಭ್ಯವಾಗಿ ವರ್ತಿಸುತ್ತಾರೆ. ಪ್ರಾಯೋಗಿಕ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ವಿದ್ಯಾರ್ಥಿಯರನ್ನು ಮಾತ್ರ ಒಳಗೆ ನಿಲ್ಲಿಸಿ ತರಗತಿಗಳನ್ನು ನಡೆಸುತ್ತಾರೆ. ಈ ಹಿಂದೆ ಇದೇ ವ್ಯಕ್ತಿಯು ಹೀಗೆ ಅನುಚಿತ ವರ್ತನೆ ತೋರಿದಾಗ, ವಿಭಾಗದ ಮುಖ್ಯಸ್ಥರ ಗಮನಕ್ಕೆ ತರಲಾಗಿತ್ತು. ಆದರೆ ಪದೇ ಪದೇ ಈ ವರ್ತನೆ ಮರುಕಳಿಸುತ್ತಿದೆ. ಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಪ್ರಾಧ್ಯಾಪಕನನ್ನು ಅಮಾನತುಗೊಳಿಸಬೇಕೆಂದು ವಿದ್ಯಾರ್ಥಿಗಳು ಆರೋಪಿಸಿದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply