ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ
ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು
ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿಖಾನ್ ಬಡಾವಣೆ ಮತ್ತು ಸೋಮಿನಕೊಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply