ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ, ಎಸ್ ರುದ್ರೇಗೌಡರ ಜನ್ಮ ದಿನದ ಪ್ರಯುಕ್ತ ಜ. 27ಕ್ಕೆ ” ಅಮೃತಮಯಿ” ಅಭಿನಂದನಾ ಕಾರ್ಯಕ್ರಮ

ಶಿವಮೊಗ್ಗ : ಮಲೆನಾಡಿನ ಹೆಸರಾಂತ ಕೈಗಾರಿಕೋಧ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಶ್ರೀ ಎಸ್. ರುದ್ರೇಗೌಡರು ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ ಅವರ ಜನ್ಮದಿನದ ಪ್ರಯುಕ್ತ ‘ಅಮೃತಮಯಿ” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ

 ಶ್ರೀ ಎಸ್. ರುದ್ರೇಗೌಡರು ಚನ್ನಗಿರಿ ತಾಲ್ಲೂಕಿನ ಪುಟ್ಟ ಗ್ರಾಮ ಲಿಂಗದಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದು ಅತ್ಯುನ್ನತ ಸಾಧನೆಗೈದವರು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

1950 ಜನವರಿ 9 ರಂದು ಜನಿಸಿದ ರುದ್ರೇಗೌಡರಿಗೆ ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ದಿನಾಂಕ 27 ಜನವರಿ 2024 ರಂದು ‘ಅಮೃತಮಯಿ” ಎನ್ನುವ ಒಂದು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಡೀ ದಿವಸ ನಡೆಯುವ ಕಾರ್ಯಕ್ರಮದಲ್ಲಿ ಬೆಳಗ್ಗೆ ವಿಚಾರಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿದೆ. .

ಶ್ರೀ ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜ ಸೇವೆ, ಕೈಗಾರಿಕೆಗಳ ವಿಸ್ತ್ರತ ಚರ್ಚೆಯನ್ನು ಯುವ ಪೀಳಿಗೆಗೆ ದಾಟಿಸಲು “ಶ್ರಮದಿಂದ ಸಾರ್ಥಕತೆಯೆಡೆಗೆ” ಎನ್ನುವ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಮೂವರು ಸ್ಪೂರ್ತಿದಾಯಕ ಸಾಧಕರಿಂದ ಯುವಕರಿಗೆ ಮಾರ್ಗದರ್ಶನ ಮಾಡಲಾಗುವುದು.

ನಂತರ 3 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕ್ಷೇತ್ರಗಳ ಆಯ್ದ ಯುವಕರೊಂದಿಗೆ ಶ್ರೀ ರುದ್ರೇಗೌಡರ ಬದುಕು-ಸಾಧನೆ ಕುರಿತು “ಅಂತರಂಗ-ಬಹಿರಂಗ” ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಬೆಳವಣಿಗೆ, ಕಷ್ಟಗಳನ್ನು ಅವಕಾಶಗಳನ್ನಾಗಿಸಿಕೊಂಡು ಸಾಧಿಸಿದ ರೀತಿ, ಉದ್ಯಮಗಳನ್ನು ಕಟ್ಟಿದ ಶ್ರಮ, ಎಲ್ಲರನ್ನೂ ಜೊತೆಯಾಗಿ ಬೆಳೆಸಿದ ಪರಿ…. ಈ ಎಲ್ಲ ವಿಚಾರಗಳನ್ನೂ ಅವರೊಂದಿಗಿನ ಆತ್ಮೀಯ ಸಂವಾದದಲ್ಲಿ ಅವರ ಪುತ್ರಿ ಶ್ರೀಮತಿ ಚೈತ್ರ ಅರುಣ್ ನಿರ್ವಹಿಸಲಿದ್ದಾರೆ.

ಸಂಜೆ 5.30 ಕ್ಕೆ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸುಪ್ರೀಕೋರ್ಟ್‌ನ ವಿಶ್ರಾಂತ ನ್ಯಾಯಾಮೂರ್ತಿಗಳಾದ ಗೌರವಾನ್ವಿತ ಶಿವರಾಜ್ ವಿ. ಪಾಟೀಲ್ ಅವರು ಉಪಸ್ಥಿತರಿದ್ದು ರುದ್ರೇಗೌಡರನ್ನು ಅಭಿನಂದಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಜನಪ್ರಿಯ ನಾಯಕರೂ ಆದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗೌಡರ ಬದುಕು-ಸಾಧನೆ ಕುರಿತಾಗಿ ಪ್ರಕಟಗೊಳ್ಳುತ್ತಿರುವ “ಎಸ್. ರುದ್ರೇಗೌಡ-ದಿ ಐರನ್ ಮ್ಯಾನ್” ಪುಸ್ತಕವನ್ನು ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ಶ್ರೀ ಬಿ.ಎಲ್ ಶಂಕರ್ ಅವರು ಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳೂ ಶಿವಮೊಗ್ಗದ ಸವಳಂಗ ರಸ್ತೆಯ ಸರ್ಜಿ ಕನ್ವೆನ್‌ಷನ್‌ ಹಾಲ್ ನಲ್ಲಿ ನಡೆಯಲಿವೆ.

ಪತ್ರಿಕಾಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರು ಹಾಗೂ ನಂಜಪ್ಪ ಗ್ರೂಫ್ ಆಫ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ಟ್ರಸ್ಟಿ ಡಿ.ಜಿ. ಬೆನಕಪ್ಪ, ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಸರ್ಜಿ ಹಾಗೂ ಸಮಿತಿಯ ಪ್ರಮುಖರಾದ , ಆ‌ರ್. ಕೆ. ಸಿದ್ರಾಮಣ್ಣ, ಎಸ್.ಎಸ.ಜ್ಯೋತಿ ಪ್ರಕಾಶ್, ಉದ್ಯಮಿ ಎನ್. ಗೋಪಿನಾಥ್, ಓಪನ್ ಮೈಂಡ್ ವರ್ಲ್ಡ್ ಸ್ಕೂಲ್ ನ ಟ್ರಸ್ಟಿ ಕೆ.ಕಿರಣ್ ಕುಮಾರ್, ಬಾಳೆಕಾಯಿ ಮೋಹನ್ ಸೇರಿದಂತೆ ಪ್ರಮುಖರು  ಉಪಸ್ಥಿತರಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.