ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ 16 ಇಲಾಖೆಗಳ 504 ಕೆಎಎಸ್‌ ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗ ಸದರಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಅಲ್ಲದೇ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ಭರ್ತಿ ವೇಳೆ ಒಂದು ಬಾರಿಗೆ ಸೀಮಿತವಾಗಿ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಕೆಪಿಎಸ್‌ಸಿ ಹೊರಡಿಸಲು ಸಿದ್ಧತೆ ನಡೆಸಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.