ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್‌ !

ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್‌ !

ಶಿವಮೊಗ್ಗ :ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ ಎನಿಸಿದ ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಯುವನಿಧಿ ಮೂಲಕ ಟಕ್ಕರ್‌ ನೀಡಿದೆ.

 ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಯುವನಿಧಿಯು ಕಾಂಗ್ರೆಸ್‌ನ ಗ್ಯಾರಂಟಿಯಾಗಿರುವುದರಿಂದ ಕಾರ್ಯಕ್ರಮದಲ್ಲಿ ಜಿಲ್ಲೆಯ ಬಿಜೆಪಿ ಸಂಸದರು ಮತ್ತು ಶಾಸಕರು ಭಾಗವಹಿಸುತ್ತಾರಾ ಇಲ್ಲವಾ ಎಂಬ ಬಗ್ಗೆ ಕುತೂಹಲವಿತ್ತು. ಆದರೆ, ಇದು ರಾಜ್ಯ ಸರಕಾರದ ಯೋಜನೆ ಎಂಬ ಕಾರಣಕ್ಕೆ ಎಲ್ಲ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲು ನಿರ್ಧರಿಸಿದ್ದಾರೆ. ಸ್ಥಳೀಯ ಶಾಸಕ ಬಿಜೆಪಿಯ ಎಸ್‌.ಎನ್‌.ಚನ್ನಬಸಪ್ಪ ಅವರೆ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿರುವುದು ವಿಶೇಷವಾಗಿತ್ತು.

ಈ ವೇಳೆ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ, ಶಿವಮೊಗ್ಗ ನಗರ ಶಾಸಕ ಎಸ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ವೇದಿಕೆ ಮೇಲೆ ಕೇಸರಿ ಶಾಲು ಧರಿಸಿಯೇ ಕುಳಿತಿದ್ದು ನೋಡುಗರಿಗೆ ಅಚ್ಚರಿ ಮೂಡಿಸಿತು.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.