ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಕೀಲ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ವಕೀಲ ಸಂಘದಲ್ಲಿ ವಕೀಲ ವೃತ್ತಿ ಮುಂದುವರೆಸುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರಿಗೆ ಆರ್ಥಿಕ ಸಂಕಷ್ಟ ತಲೆದೋರಿತ್ತು.ಇದರಿಂದ ಹೊರಬರಲು ಹಳೆಯ ವೃತ್ತಿಗೆ ಮರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಇದೆ ನನ್ನ ಕೊನೆ ಚುನಾವಣೆ ಎಂದಿದ್ದ ಅವರಿಗೆ ಮತದಾರ ಕೈಹಿಡಿಯಲಿಲ್ಲ. ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಎಂದು ಹೇಳಿಕೊಳ್ಳದಿದ್ದರು ಅವರ ಹೆಸರು ಅಲ್ಲಲ್ಲಿ ಕೇಳಿಬರುತಿತ್ತು. ಶುಕ್ರವಾರ ಸಿಎಂ ಹಾದಿಯಾಗಿ ಸಚಿವ ಸಂಪುಟವೇ ಶಿವಮೊಗ್ಗದಲ್ಲಿ ಇರಲಿದ್ದು ಕಿಮ್ಮನೆ ಅವರ ಜತೆ ಮಾತುಕತೆ ನಡೆಸಲಿದ್ದಾರೆಯೇ ಕಾದು ನೋಡಬೇಕಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.