ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ
ಶಿವಮೊಗ್ಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೇ ಜನವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆ ವರೆಗೆ ರಾಜ್ಯದ್ಯಂತ ಪರೀಕ್ಷೆ ನಡೆಸಲಾಗುವುದು.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳು ಕರ ಪತ್ರ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.
ಕರೆ ಪತ್ರ ಡೌನ್‍ಲೋಡ್ ಮಾಡುವ ಲಿಂಕ್ ಮತ್ತು ಕರೆಪತ್ರದ ಬಗ್ಗೆ ವಿವರವನ್ನು ನೊಂದಾಯಿತ ಮೊಬೈಲ್ ಸಂಖ್ಯೆಗೆ ಮುಂದಿನ ದಿನದಲ್ಲಿ ಎಸ್ ಎಂ ಎಸ್ . ಮೂಲಕ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply