ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ! ಹೊತ್ತಿ ಉರಿದ ಮನೆ !
ಶಿವಮೊಗ್ಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ, ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ. ಭದ್ರಾವತಿ ಪಟ್ಟಣದ ಹಳದಮ್ಮ ಬೀದಿಯಲ್ಲಿ ಈ ಘಟನೆ ಸಂಭವಿಸಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ.
ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರಬಹುದು ಎಂದು ಶಂಕಿಸಲಾಗಿದ್ದು. ವಾಸು ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಹಾನಿಯಾಗಿವೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ತಡರಾತ್ರಿ ನಡೆದ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ.
ಜಮೀನು ಮಾರಿದ್ದ ಹಣ, ಒಡವೆ ಎಲ್ಲವು ಸುಟ್ಟು ಹೋಗಿದೆ ಎಂದು ಮನೆ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply