ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ  !

ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ !

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ.

ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

14 ವರ್ಷಗಳಿಂದ ಜೊತೆಯಾಗಿ ಜೀವನ ನಡೆಸಿದ್ದ ದಂಪತಿ ನಡುವೆ ಕೌಟುಂಬಿಕ ಕಲಹ ಇತ್ತು. ತಿಂಗಳ ಹಿಂದೆ ಮೂವರು ಹೆಣ್ಣು ಮಕ್ಕಳೊಂದಿಗೆ ನೀಲಾವತಿ ತವರಿಗೆ ಹೋಗಿದ್ದರು. ಶನಿವಾರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಗಂಡನ ಮನೆಗೆ ಬಂದ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಲೋಕೇಶ್ ಜಗಳವಾಡಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ನೀಲಾವತಿಯನ್ನು ಸ್ಥಳೀಯರು ತುಮರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ತುರ್ತು ಲಾಂಚ್ ವ್ಯವಸ್ಥೆ ಮೂಲಕ ಸಾಗರದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.