ಹೋರಿ ಬೆದರಿಸುವ ಸ್ಪರ್ಧೆ : ಹೋರಿ ತಿವಿದು ಯುವಕ ಸಾವು
ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ. .
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರಾಮು (26) ಹೋರಿ ತಿವಿದು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ತೆರಳಿದ್ದ ವೇಳೆ ಹೋರಿ ಕುತ್ತಿಗೆಗೆ ತಿವಿದು ರಾಮು ಗಾಯಗೊಂಡಿದ್ದ. ಕೂಡಲೇ ಆತನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರಂತೆ. ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಕೂಡ ಇದೇ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಸಾವನ್ನಪ್ಪಿದ್ದ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply