ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಕ್ರಿಯೆ !
ಶಿವಮೊಗ್ಗ : ಶಿವಮೊಗ್ಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, 500 ವರ್ಷಗಳ ಕನಸು ಇಂದು ನನಸಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು, ಶ್ರೀರಾಮಸೇನೆ ಕಾರ್ಯಕರ್ತರು ಸಿಹಿ ಹಂಚುವ ವೇಳೆ “ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿರುವುದು ನನ್ನ ಗಮನಕ್ಕೂ ಬಂದಿದೆ. ಆಕೆ ಹುಚ್ಚಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಆದರೆ, ಆಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡಿದ್ದಾರೆ. ಇದು ಖಂಡನೀಯವಾಗಿದ್ದು, ಆ ಮಹಿಳೆಯನ್ನು ವಶಕ್ಕೆ ಪಡೆದು ತನಿಖೆ ಮಾಡಬೇಕು. ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಹಿಳೆ ಮೇಲೆ ಕೇಸ್ ದಾಖಲಿಸಿ ತನಿಖೆ ನಡೆಸಬೇಕು. ಇದರ ಹಿಂದೆ ಷಡ್ಯಂತ್ರ ಇದೆಯಾ ಎಂಬುದು ತನಿಖೆಯಿಂದ ಗೊತ್ತಾಬೇಕಿದೆ. ಆಕೆ ಹುಚ್ಚಿಯಾ ಎಂಬುದನ್ನೂ ತಿಳಿದುಕೊಳ್ಳಬೇಕು.
ಈ ಬಗ್ಗೆ ನಿಪಕ್ಷಪಾತವಾದ ತನಿಖೆ ನಡೆಸಬೇಕು. ರಾಮ ಮಂದಿರದ ಸಂಭ್ರಮದ ವೇಳೆ ಆಕೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿರುವುದು ಸರಿ ಅಲ್ಲ. ಘೋಷಣೆ ಕೂಗಿದ್ದು ಯಾಕೆ ಎಂದು ತನಿಖೆ ಮಾಡಬೇಕು. ರಾಮಮಂದಿರ ಪ್ರತಿಷ್ಠಾಪನೆ ವೇಳೆ ಈ ಘಟನೆ ತೀವ್ರ ನೋವು ತಂದಿದೆ ಎಂದು ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply