ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ – ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ: ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಜೀವನದ ಮೌಲ್ಯಗಳು ಹಾಗೂ ಸಂಸ್ಕಾರ ಕುರಿತು ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅವಶ್ಯಕವಾಗಿರುತ್ತದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ನಗರದ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ದೈಹಿಕ ಕವಾಯತು ಪ್ರದರ್ಶನ, ಬ್ಯಾಂಡ್ ಪ್ರದರ್ಶನ ಹಾಗೂ ರಿಟ್ರೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸ್ಕೌಟ್ ಮತ್ತು ಗೈಡ್‌ನಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವಿಶೇಷ ಕೌಶಲ್ಯ ಹಾಗೂ ನಾಯಕತ್ವ ಗುಣ ಬೆಳೆಯುತ್ತದೆ. ಸೇವಾ ಮನೋಭಾವನೆ ವೃದ್ಧಿಸುವ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಉತ್ತಮ ಸಾಧನೆ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯುಕ್ತ ಸ್ಕೌಟ್ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಗೆ ನೂರಾರು ವರ್ಷದ ಇತಿಹಾಸ ಇದ್ದು, ಸ್ಕೌಟ್‌ನಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಉನ್ನತ ಸಾಧನೆ ಮಾಡಿ ವಿಶ್ವಾದ್ಯಂತ ವೃತ್ತಿ ಜೀವನದಲ್ಲಿ ಯಶಸ್ವಿ ಜೀವನ ನಡೆಸಿದ್ದಾರೆ ಎಂದು ಹೇಳಿದರು.
Leave a Reply