ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ !
ಶಿವಮೊಗ್ಗ : ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ ಮಹಿಳೆ ಮೃತಪಟ್ಟು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿಕಾರಿಪುರ ಸಮೀಪದ ಚಿನ್ನಿಕಟ್ಟೆ ಬಳಿ ನಡೆದಿದೆ. ಶಿವಮೊಗ್ಗದಿಂದ ಸಿಮಂತಕ್ಕೆಂದು ಕೊಡಮಗ್ಗಿಗೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಮೃತಪಟಿದ್ದು, ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎದುರುಗಡೆಯಿಂದ ಬಂದ ವಾಹನವನ್ನ ತಪ್ಪಿಸಲು ಹೋಗಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಪಲ್ಟಿ ಹೊಡೆದಿದೆ. ರುಕ್ಸಾನಾ ಎಂಬ ಮಹಿಳೆಯ ಸೀಮಂತ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಆರ್ ಎಂ ಎಲ್ ನಗರದ 19 ಜನರಲ್ಲಿ ಹಂವಸೀರ್ ಮಹಿಳೆ ಸಾವುಕಂಡರೆ ಓರ್ವ ಫಾತೀಮ ಎಂಬ ಮಹಿಳೆಗೆ ತೀವ್ರಗಾಯಗಳಾಗಿವೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply