ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ  ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವು !

ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವು !

ಶಿವಮೊಗ್ಗ :ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ದ ವಿನೋಬನಗರದ3ನೇ ಕ್ರಾಸ್ ರೇಲ್ವೆ ಟ್ರ್ಯಾಕ್ ಬಳಿ ನಡೆದಿದೆ.

ಮುತ್ತಪ್ಪ(42) ಮೃತ ವ್ಯಕ್ತಿ. ಸ್ಥಳಕ್ಕೆ ವಿನೋಬನಗರ ಠಾಣಾಧಿಕಾರಿ ಚಂದ್ರಕಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇತ್ತ ಮೃತನ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಅಪೂರ್ಣ ಮತ್ತು ಕಳಪೆ ಕಾಮಗಾರಿಯಿಂದ ದುರ್ಘಟನೆ ನಡೆದಿದೆ ಎಂದಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಭೇಟಿ

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು ‘ಶಿವಮೊಗ್ಗ ಪಾಲಿಕೆಯ ಆಯುಕ್ತ ರು ಮತ್ತು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಘಟನೆ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.