ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ನಾರಾಯಣ ಹೆಗಡೆ ಅಧಿಕಾರ ಸ್ವೀಕಾರ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಆರ್ ಸೇಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆಗಿದ್ದಂತಹ ಗುರುದತ್ತ ನಾರಾಯಣ ಹೆಗಡೆ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲು ಸರ್ಕಾರ ಭಾನುವಾರ ಆದೇಶ ಹೊರಡಿಸಿತ್ತು.
ವರ್ಗಾವಣೆ ಆದೇಶ ಹೊರ ಬಿದ್ದು ಎರಡು ದಿನಗಳ ನಂತರ, ಗುರುದತ್ತ ನಾರಾಯಣ ಹೆಗಡೆ ಅವರು ನೆನ್ನೆ ಬುದುವಾರ ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಗುರುದತ್ತ ಹೆಗಡೆ ಕಚೇರಿಯ ಎಲ್ಲಾ ವಿಭಾಗಕ್ಕೂ ಭೇಟಿ ನೀಡಿ ಸಿಬ್ಬಂದ್ದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಶಿವಲಿಂಗಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಇನ್ನೂ ನೂತನ ಜಿಲ್ಲಾಧಿಕಾರಿ ಗುರುದತ್ತ ನಾರಾಯಣ ಹೆಗಡೆಯವರು 2014ನೇ ಬ್ಯಾಚಿನ ಐಎಎಸ್ ಅಧಿಕಾರಿ,ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನೆಗದ್ದೆ ಗ್ರಾಮದವರು. ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಧಾರವಾಡದ ಕೆ ಇ ಬೋರ್ಡ್ ಶಾಲೆಯಲ್ಲಿ ಮಾಡಿದ್ದಾರೆ. ಪಿಯು ಶಿಕ್ಷಣವನ್ನು ಸಹ ಧಾರವಾಡದಲ್ಲಿಯೇ ಪೂರೈಸಿದ್ದಾರೆ. ಬೆಂಗಳೂರಿನ ಆರ್. ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply