ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು !

ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು !

ಶಿವಮೊಗ್ಗ : ಗುರುವಾರ ನಗರದ ಗೋಪಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 3000 ಹಾಫ್ ಹೆಲ್ಮೆಟ್ ಹಾಗೂ 75 ದೋಷ ಪೂರಿತ ಸೈಲೆನ್ಸರ್ ಗಳನ್ನು ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು. ಆ ಮೂಲಕ ಸ್ಕೂಟರ್, ಬೈಕ್‌ ಸವಾರರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದರು.

ಸುಮಾರು 3 ಸಾವಿರ ಹಾಫ್ ಹೆಲ್ಮೆಟ್ ಗಳು, 70 ಸೈಲೆನ್ಸರ್‌ಗಳನ್ನು ಸಂಚಾರ ಪೊಲೀಸರು ನಾಶಪಡಿಸಿದ್ದಾರೆ. ಗೋಪಿ ಸರ್ಕಲ್‌ನಲ್ಲಿ ಎಲ್ಲವನ್ನು ಸಾಲಾಗಿ ಜೋಡಿಸಿ, ಅವುಗಳ ಮೇಲೆ ರೋಡ್ ರೋಲರ್ ಹತ್ತಿಸಲಾಯಿತು. ಈ ಸಂದರ್ಭ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್‌ಕುಮಾರ್ ಸೇರಿದಂತೆ ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಸಿಬ್ಬಂದಿ ಇದ್ದರು. ಕಾರ್ಯಾಚರಣೆ ವೀಕ್ಷಿಸಲು ಗೋಪಿ ಸರ್ಕಲ್‌ನಲ್ಲಿ ದೊಡ್ಡ ಸಂಖ್ಯೆಯ ಜನರು ಜಮಾಯಿಸಿದ್ದರು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಹಾಫ್ ಹೆಲ್ಮೆಟ್ಟ್‌ಗಳ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿರುವುದು ಇದೇ ಮೊದಲಲ್ಲ. ಕೆಲವು ತಿಂಗಳ ಹಿಂದೆ ಸಾವಿರಾರು ಹಾಫ್ ಹೆಲ್ಮೆಟ್ ಗಳನ್ನು ದ್ವಿಚಕ್ರ ವಾಹನ ಸವಾರರಿಂದ ವಶಕ್ಕೆ ಪಡೆದು ನಾಶಪಡಿಸಿದ್ದರು. ಇನ್ನು ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆಯೂ ದಾಳಿ ನಡೆಸಿದ್ದರು.

ಐಎಸ್‌ಐ ಗುರುತಿನ ಹೆಲ್ಮೆಟ್ ಧರಿಸುವಂತೆ ಪೊಲೀಸರು ಜಾಗೃತಿ ಮೂಡಿಸಿದ್ದರು. ಜೊತೆಗೆ ಬೈಕುಗಳಿಗೆ ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ಅಳವಡಿಸಿ, ತಿರುಗಾಡು ತ್ತಿದ್ದವರಿಗೂ ಪೊಲೀಸರು ಮುಟ್ಟಿಸಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.