ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾಯಿಯನ್ವಯ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನ. ಅರ್ಜಿಗಳನ್ನು ಸಂಬಂಧಿಸಿದ 14 ಗ್ರಾ.ಪಂ ಗಳಲ್ಲಿ ಮತ್ತು ವೆಬ್ಸೈಟ್ https://shimoga.nic.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಗ್ರಾ.ಪಂ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.