ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ದಾಳಿ ! ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಎಫ್.ಡಿ.ಎ !

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ದಾಳಿ ! ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಎಫ್.ಡಿ.ಎ ! 

ಶಿವಮೊಗ್ಗ : ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸಿಂಹಸ್ವಪ್ನ ಆಗಿರುವ ಲೋಕಾಯುಕ್ತ ಇಲಾಖೆ, ನೆನ್ನೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಧೀಡಿರ್ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಓರ್ವ ಎಫ್​ಡಿಎ ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಲಂಚ ಪಡೆಯುವಾಗ ಎಫ್​ಡಿಎ ಅಧಿಕಾರಿಯೊಬ್ಬ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಮಹಾನಗರ ಪಾಲಿಕೆಯಲ್ಲಿ ಜನನ ಮತ್ತು ಮರಣ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್‌ಡಿಎ ಅಧಿಕಾರಿ ಆಗಿರುವ ನಾಗರಾಜ್ ಅವರು ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಇನ್ನು ಗಿರೀಶ್ ಎಂಬುವವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ DySP ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.