ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ ! ಮೂವರಿಗೆ ಗಂಭೀರ ಗಾಯ !

ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ ! ಮೂವರಿಗೆ ಗಂಭೀರ ಗಾಯ !

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗೋಂದಿ ಚಟ್ನಹಳ್ಳಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 ಗಾಯಾಳುಗಳನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯ ಮೊದಲು ದಾಖಲು ಮಾಡಲಾಗಿತ್ತು. ಬಳಿಕ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಅಲ್ಲಿ ಸೂಕ್ತ ಚಿಕಿತ್ಸೆ ಸಿಗದ ಹಿನ್ನಲೆ ಮಂಗಳೂರಿನಿಂದ ಮತ್ತೆ ಮೂವರನ್ನು ಶಿವಮೊಗ್ಗಕ್ಕೆ ಕರೆತರಲಾಯಿತು. ಬೆಳಗಿನ ಜಾವ ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು ಗಾಯಳು ಕುಟುಂಬಸ್ಥರು ಹೇಳಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.