ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಇಂದು ಮಾಡಿದ್ದಾರೆ ನಡುವೆ ಆರಂಭದಲ್ಲಿ ಅವರು ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಕೆಲವು ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
- ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಾಣ
- ಫುಡ್ ಪಾರ್ಕ್: ಶಿವಮೊಗ್ಗದ ಸೋಗಾನ ವಿಮಾನ ನಿಲ್ದಾಣದ ಬಳಿಯಲ್ಲಿ ಆಹಾರ ಪಾರ್ಕ್ ನಿರ್ಮಾಣ
- ಶಿವಮೊಗ್ಗದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ: ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ಒದಗಿಸಲು ಕ್ರಮ
- ರೈಲ್ವೆ ಮೇಲ್ಸ್ತುವೆ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಮೇಲ್ಲೇತುವೆ ನಿರ್ಮಾಣ
- ತಾರಾಲಯ: ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.
- ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ
- ಭದ್ರಾವತಿಯಲ್ಲಿ ಅತ್ಯಾಧುನಿಕ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ
ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೆಲವೊಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅನುದಾನವನ್ನೂ ಸಹ ಮೀಸಲಿಡುವುದಾಗಿ ಹೇಳಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply