ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !
ಭದ್ರಾವತಿ : ತಡರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಅಡ್ಡಾ ದಿಡ್ಡಿ ಕಾರು ಚಲಾಯಿಸಿ ಎರಡು ಆಟೋ, ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ
ನಿನ್ನೆ ತಡ ರಾತ್ರಿ ಭದ್ರಾವತಿ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಆಟೋ ಬಸ್ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಆಟೋ ದಲ್ಲಿ ಕುಳಿತಿದ್ದ ಓರ್ವ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ.
ಕಾರು ಚಾಲಕ ಮದ್ಯ ಸೇವಿಸಿದ್ದು, ಕುಡಿದ ಮತ್ತಿನಲ್ಲಿ ಅಡ್ಡಾ ದಿಡ್ಡಿ ಕಾರು ಚಲಾಯಿಸಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply