ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !
ಹೊಸನಗರ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಎಂ ಗುಡ್ಡೆಕೊಪ್ಪ ಸಮೀಪ ಮಾರುತಿ ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖ ಮುಖಿ ಡಿಕ್ಕಿ ಆಗಿರುವ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು. ಕಾರು ಚಾಲಕನನ್ನ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಓಮಿನಿಯಲ್ಲಿ ಇದ್ದ ಆರು ಮಕ್ಕಳು ಸೇರಿದಂತೆ ಒಟ್ಟು 12 ಮಂದಿಗೆ ಗಂಭೀರವಾಗಿ ಗಾಯವಾಗಿದ್ದು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಗೂ ಇವರನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡ ನಿವಾಸಿಗಳು ಎಂದು ಗುರುತಿಸಲ್ಪಟ್ಟಿದೆ. ಕುಟುಂಬ ಸಮೇತ ಗೋಳಿಗರಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಹೊಸನಗರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply