ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !
ಕಲುಬುರಗಿ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.
ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.
ಈ ಹೊಡೆದಾಟದಲ್ಲಿ ಎರಡು ಗುಂಪಿನ ಕೆಲವರಿಗೆ ಗಾಯಗಳಾಗಿವೆ.
ಘಟನೆಯ ಬಳಿಕ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply