ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಮನೆಯಲ್ಲಿದ್ದ ಒಬ್ಬ ವ್ಯಕ್ತಿಯನ್ನು ಹಾಗೂ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು. ಮಹಿಳೆಯ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಇನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಣೆ ಮಾಡಿದ್ದು. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply