ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !
ಸೊರಬ : ಲಂಚ ಸ್ವೀಕರಿಸುತ್ತಿದ್ದಾಗ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ.
ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಅವರು ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಖಾಲಿ ನಿವೇಶನಕ್ಕೆ ಸಂಬಂಧಿಸಿದ ಕೆಲಸಕ್ಕೆ ಪ್ರತಿಭಾ ಎಂ. ನಾಯ್ಕ ಎಂಬರಿಂದ 50 ಸಾವಿರ ರೂಪಾಯಿ ಲಂಚಕ್ಕೆ ಅವರು ಬೇಡಿಕೆ ಇಟ್ಟಿದ್ದು, ಚರ್ಚೆ ನಡೆಸಿ 40 ಸಾವಿರ ರೂಪಾಯಿ ನೀಡಲು ಹೇಳಿದ್ದರು.
ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply