ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !
ಶಿವಮೊಗ್ಗ : ಮಾರ್ಚ್ 8ರಂದು ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ.
ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply