ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 32 ಚಾಲಕ ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಲ್ಲದೇ ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

(https://kla.kar.nic.in/council/notification04032024.PDF)ಅರ್ಜಿ ಸಲ್ಲಿಸಬೇಕಾದ ವಿಳಾಸ ಅರ್ಜಿಗಳನ್ನು ಸಚಿವಾಲಯದ ವೆಬ್‌ಸೈಟ್‌ ನಲ್ಲಿ (https://kla.kar.nic.in/council/notification04032024.PDF) ನೀಡಿದ್ದು ನಮೂನೆ-1 ರ ದ್ವಿಪ್ರತಿಯಲ್ಲಿ ಅಗತ್ಯವುಳ್ಳ ದಾಖಲೆಗಳನ್ನು ಲಗತ್ತಿಸಿ, ಕೊನೆಯ ದಿನಾಂಕ 05-04-2024 ರಂದು ಸಂಜೆ 05-00 ಗಂಟೆಯೊಳಗಾಗಿ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ – 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560 001 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆಯ ಮೂಲಕ ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 216 ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸತಕ್ಕದ್ದು

ಹುದ್ದೆಯ ಮಾಹಿತಿ: ಡ್ರೈವರ್- 3 ಹುದ್ದೆಗಳು- ಗ್ರೂಪ್ ಡಿ ಹುದ್ದೆಗಳು- 29 (ಅಂಧ ಮತ್ತು ಕಡಿಮೆ ದೃಷ್ಟಿ ಹೊಂದಿರುವವರಿಗೆ 3 ಹುದ್ದೆಗಳು) ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 21,400-42,000 ಸಂಬಳ ಕೊಡಲಾಗುತ್ತದೆ.ಡ್ರೈವರ್- ಮಾಸಿಕ ₹ 21,400-42,000, ಗ್ರೂಪ್ ಡಿ ಹುದ್ದೆಗಳು- ಮಾಸಿಕ ₹ 17,000-28,950 ರೂಪಾಯಿ ವೇತನ.ವಿದ್ಯಾರ್ಹತೆ: ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ವಾಹನ ಚಾಲಕರು ಹುದ್ದೆಗೆ – ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌. ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಮೋಟಾರು ಕಾರುಗಳ ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು. ಗ್ರೂಪ್ ಡಿ ಹುದ್ದೆಗಳಿಗೆ – ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿಬೇಕು.ವಯೋಮಿತಿ: ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 5, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳುSC/ST/Cat-I ಅಭ್ಯರ್ಥಿಗಳು: 05 ವರ್ಷಗಳುPWD ಅಭ್ಯರ್ಥಿಗಳು: 10 ವರ್ಷಗಳುಅರ್ಜಿ ಶುಲ್ಕSC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.350/-ಸಾಮಾನ್ಯ ಅಭ್ಯರ್ಥಿಗಳು: ರೂ.600/-ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ಪ್ರಮುಖ ದಿನಾಂಕಗಳುಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್​ 6, 2024ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 5, 2024ಅರ್ಜಿ ಹಾಕೋದು ಹೇಗೆ?ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.ಕಾರ್ಯದರ್ಶಿಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿಅಂಚೆ ಪೆಟ್ಟಿಗೆ ಸಂಖ್ಯೆ. 50791 ನೇ ಮಹಡಿವಿಧಾನ ಸೌಧಬೆಂಗಳೂರು – 560001

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.