BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ  ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ  ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

ಶಿವಮೊಗ್ಗ : ಈ ಬಾರಿ 400 ಸೀಟುಗಳನ್ನು ಪಡೆದು ನರೇಂದ್ರ ಮೋದಿಯನ್ನು ಮೂರನೇ ಬಾರಿ ಪ್ರಧಾನಿ ಮಾಡುವ ಗುರಿಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲೂ ಭರ್ಜರಿ ಪ್ರಚಾರ ಕೈಗೊಳ್ಳಲು ವೇಳಾಪಟ್ಟಿ ನಿಗದಿಗೊಳಿಸಿದೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ ಹಲವು ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ.

ಕರ್ನಾಟಕದಲ್ಲಿ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸುತ್ತಿನ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 

ಮಾ.17 ರಂದು ಶಿವಮೊಗ್ಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ನಂತರ ಅಲ್ಲಿಂದ ನೇರ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಮಧ್ಯಾಹ್ನ 2 ಗಂಟೆಗೆ ನಗರದ ಅಲ್ಲಮ್ಮ ಪ್ರಭು ಮೈದಾನದಲ್ಲಿ ( ಫ್ರೀಡಂ ಪಾರ್ಕ್ ) ಬೃಹತ್‌ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೃಹತ್‌ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಸಿದ್ಧತೆ ಆರಂಭಿಸಿದ್ದು ಕಾರ್ಯಕ್ರಮದ ರೂಪುರೇಷೆ ಕುರಿತು ಸಭೆ ನಡೆಸಿದೆ. ಸಾರ್ವಜನಿಕ ಕಾರ್ಯಕ್ರಮದ ಮೊದಲು ರೋಡ್‌ ಶೋ ನಡೆಸಲೂ ಚಿಂತನೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲಿ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.