ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !
ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು 3 ಗಂಟೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಕುಸ್ತಿಪಂದ್ಯಾವಳಿಯನ್ನು ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಬಹುಮಾನ ವಿತರಿಸುವರು. ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಆಗಮಿಸುವರು.
ಮಾ.16ರ ಮಧ್ಯಾಹ್ನ 3ಗಂಟೆಗೆ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ, ಶಾಸಕರಾದ ಶಾರದ ಪೂರನಾಯ್ಕ, ರುದ್ರೇಗೌಡರು, ಮಾಜಿ ಶಾಸಕ ಆರ್.ಕೆ. ಸಿದ್ರಾಮಣ್ಣ ಭಾಗವಹಿಸುವರು. ಮಾ.17ರಂದು ಕೂಡ ಪಂದ್ಯಾವಳಿಯಲ್ಲಿ ಗೆದ್ದ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಉದ್ಘಾಟಿಸುವರು.ಎಂಐಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಮಾಜಿ ಸಂಸದ ಆಯನೂರು ಮಂಜುನಾಥ್, ಮಾಜಿ ಶಾಸಕ ಆರ್.ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಭಾಗವಹಿಸಲಿದ್ದಾರೆ.
ಅಖಾಡದ ಕೊನೆಯ ಕುಸ್ತಿಗೆದ್ದ ಪೈಲ್ವಾನರಿಗೆ ಬೆಳ್ಳಿ ಗದೆ ಮತ್ತು 50 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ದೇವಸ್ಥಾನದ ಆವರಣದಲ್ಲಿ ಮಾ.14ರಿಂದ 16ರ ವರೆಗೆ ಪ್ರತಿದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 14ರಂದು ಭರತನಾಟ್ಯ, 15ರಂದು ಸುಗಮ ಸಂಗೀತ, 16ರಂದು ಸಂಗೀತ ಸಂಜೆ ನಡೆಯಲಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply