ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ  ಜಾರಿ !

ಪೆಟ್ರೋಲ್ ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ ! 

ಶಿವಮೊಗ್ಗ : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಾಹನಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಹಲವು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್‌ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಮಾರ್ಚ್ ನಲ್ಲಿ ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 

ನಾಳೆ ಬೆಳಗ್ಗೆಯಿಂದ ಅಂದರೆ 15ರ ಬೆಳಗ್ಗೆ 6ರಿಂದ ಪರಿಷ್ಕೃತ ದರ ಜಾರಿಯಾಗಲಿದ್ದು ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದ್ದು. ನಾಳೆ(ಮಾರ್ಚ್ 15) ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.

ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.