ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ?
ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ
ಹೇಗಿದೆ ಬಂದೋಬಸ್ತ್ ?
ಇನ್ನೂ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಈ ಹಿನ್ನಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಸಾಗುವ ಮಾರ್ಗದುದ್ದಕ್ಕೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಪ್ರಧಾನಿ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಪಡೆ ನಿರಂತರ ಗಸ್ತು ತಿರುಗುತ್ತಿದ್ದಾರೆ.ಇನ್ನು, ಪ್ರಧಾನ ಮಂತ್ರಿಯ ಭದ್ರತಾ ಪಡೆ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (ಎಸ್‌ಪಿಜಿ) ಈಗಾಗಲೆ ವೇದಿಕೆ ಬಳಿ ಆಗಮಿಸಿದೆ. ಅಲ್ಲಮಪ್ರಭು ಮೈದಾನವನ್ನು ಎಸ್‌ಪಿಜಿ ಕಮಾಂಡೊಗಳು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಮೈದಾನದ ಒಳ, ಹೊರಗೆ ಹೋಗುವ ಪ್ರತಿಯೊಬ್ಬರ ಮೇಲೂ ನಿಗಾ ಇಟ್ಟಿದ್ದಾರೆ
ತೆರೆದ ವಾಹನದಲ್ಲಿ ಜನರ ಬಳಿ ಬರುವ ಮೋದಿ !
ಹೌದು ಪ್ರಧಾನಿ ನರೇಂದ್ರ ಮೋದಿ ಅಲ್ಲಮಪ್ರಭು ಮೈದಾನದಲ್ಲಿ ಬಂದು ನೇರವಾಗಿ ವೇದಿಕೆಗೆ ಆಗಮಿಸದೆ. ತೆರೆದ ವಾಹನದ ಮುಖಾಂತರ ಜನರ ಮಧ್ಯದಿಂದ ವೇದಿಕೆ ಬಳಿ ಸಾಗುತ್ತಾರೆ. ಇದಕ್ಕಾಗಿ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.ಇದಕ್ಕಾಗಿ ಸಮಾವೇಶದ ಪೆಂಡಾಲ್‌ನ ಅಡಿಯಲ್ಲಿ ಕಾರು ಹಾದು ಹೋಗುವಷ್ಟು ಜಾಗ ಮೀಸಲಿಡಲಾಗಿದೆ.
ವೇದಿಕೆಯ ಮೇಲೆ ಯಾರ್ಯಾರು ಇರಲಿದ್ದಾರೆ ?
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply