ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ !
ಸಾಗರ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದನ್ನು ಜಪ್ತಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಕಾರೊಂದರಲ್ಲಿ ಎರಡು ಲಕ್ಷ ಹಣ ಪತ್ತೆಯಾಗಿದೆ, ಹಣ ಪತ್ತೆಯಾದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಸರಿಯಾದ ದಾಖಲೆ ನೀಡದ ಕಾರಣ, ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಈ ವೇಳೆ ಎಂಸಿಸಿ ನೋಡಲ್ ಅಧಿಕಾರಿಗಳಾದ ನಾಗೇಶ್ ಬ್ಯಾಲಾಳ್, ಮಹಮ್ಮದ್ ಹನೀಫ್, ಮಾಲಿನಿ, ವಿನಾಯಕ್, ಸಬ್ ಇನ್ಸ್‌ಪೆಕ್ಟರ್ ಹೊಳಬಸಪ್ಪ ಹೊಳಿ ನೇತೃತ್ವದ ತಂಡ ಈ ಹಣವನ್ನು ಜಪ್ತಿ ಮಾಡಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply