ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ?
ಶಿವಮೊಗ್ಗ : ಲೋಕಸಭಾ ಚುನಾವಣೆ 2014ರ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ.
ಇಂದು ಬೆಳಿಗ್ಗೆ 11:30 ಸುಮಾರಿಗೆ ಇಬ್ಬರು ಡಿವೈಎಸ್ಪಿ ಹಾಗೂ 10 ಇನ್ಸ್ಪೆಕ್ಟರ್ ಹಾಗೂ 60 ಕ್ಕೂ ಹೆಚ್ಚು ಪೊಲೀಸರು ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ನೇತೃತ್ವದ ತಂಡ ದಾಳಿ ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಕಾರಾಗೃಹದಲ್ಲಿ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎನ್ನಲಾಗಿದೆ. ಇನ್ನೂ ಪೊಲೀಸ್ ಪರಿಶೀಲನೆ ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply